ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ 1000 ಪಿಎಸ್ಐ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಈಗಾಗಲೇ 500 ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಇದರ ನಡುವೆ ಇತರೆ ಖಾಲಿ ಹುದ್ದೆಗಳ ಭರ್ತಿಗೆ ಆದಷ್ಟೂ ಬೇಗ ಕ್ರಮ ಜರುಗಿಸಲಾಗುವುದು. ರಾಜ್ಯದಲ್ಲಿ ಒಟ್ಟು 8000 ಕಾನ್ಸ್ಟೆಬಲ್ ಹುದ್ದೆಗಳು ಖಾಲಿ ಇವೆ. ಅವುಗಳನ್ನೂ ಕೂಡ ಹಂತಹಂತವಾಗಿ ಭರ್ತಿ ಮಾಡಲಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಸಂಚಾರಿ ಪೊಲೀಸ್ ಠಾಣೆಗಳನ್ನು ತೆರೆಯುವ ಕುರಿತು ಮುಂದಿನ ಬಜೆಟ್ ನಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ 545 ಪಿಎಸ್ಐ ನೇಮಕಾತಿಯಲ್ಲಿ ಹಗರಣ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಲಿಖಿತ ಪರೀಕ್ಷೆಯನ್ನು ನಡೆಸಿತ್ತು.