ಬೆಳಗಾವಿ: ರಾಜ್ಯ ಸರ್ಕಾರವು ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಇದನ್ನು ಖಂಡಿಸಿ ಜು.3 ಮತ್ತು 4ರಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆಂದು ವಿಪಕ್ಷ ನಾಯಕ, ಬಿಜೆಪಿ ಹಿರಿಯ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿ, ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ವಾರದ ಹಿಂದಷ್ಟೇ ಇಂಧನ ಬೆಲೆ ಹೆಚ್ಚಿಸಿದ್ದ ಸರ್ಕಾರ, ಇದೀಗ ಹಾಲಿನ ದರವನ್ನೂ ಹೆಚ್ಚಳ ಮಾಡಿದೆ. ಸರ್ಕಾರ ಐದಲ್ಲ, ಐವತ್ತು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿ. ಆದರೆ ಅವುಗಳೆಲ್ಲವೂ ವೈಜ್ಞಾನಿಕವಾಗಿರಬೇಕು.
ಹಣದ ಕೊರತೆಯಿಂದ ಬೆಲೆ ಹೆಚ್ಚಳ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದೆ. ಸಚಿವ ಸಂಪುಟದ ಮುಂದೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ಪ್ರಸ್ತಾಪವಿದೆ. ಆದರೆ ಹಣವಿಲ್ಲದ ಕಾರಣಕ್ಕೆ ಸರ್ಕಾರ ಅದನ್ನು ಕಡೆಗಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.