ದೆಹಲಿ: ಸ್ಪೀಕರ್ ಸ್ಥಾನಕ್ಕೆ ಸ್ಪರ್ಧಿಸುವ ನಿಮ್ಮ ಅಭ್ಯರ್ಥಿಯನ್ನು ನಾವು ಬೆಂಬಲಿಸುತ್ತೇವೆ. ಆದರೆ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ಸ್ಪರ್ಧಿಸುವ ನಮ್ಮ ಅಭ್ಯರ್ಥಿಯನ್ನು ನೀವು ಬೆಂಬಲಿಸಬೇಕೆಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಬಳಿ ಕೇಳಿದ್ದೇವೆಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿ, ಸಚಿವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದರು. ಈ ವೇಳೆ ಖರ್ಗೆ ಕೂಡ ಬೇಡಿಕೆ ಸಲ್ಲಿಸಿದ್ದಾರೆ. ಈ ಸಂಬಂಧ ನಮ್ಮ ವರಿಷ್ಠರೊಂದಿಗೆ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ರಾಜನಾಥ್ ಭರವಸೆ ನೀಡಿದ್ದಾರೆ ಎಂದಿದ್ದಾರೆ.
ಮಾತು ಮುಂದುವರಿಸಿದ ರಾಹುಲ್, ಪ್ರಧಾನಿ ಮೋದಿ ನಮಗೆ ಬೆಂಬಲ ಕೊಡಿ ಎಂದು ವಿಪಕ್ಷಗಳ ಬಳಿ ಕೇಳಿಕೊಂಡಿದ್ದು, ಆ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾಗಿದೆ. ಆದರೆ ಬಿಜೆಪಿ ನಾಯಕರಿಂದ ನಮ್ಮ ನಾಯಕರಿಗೆ ಅವಮಾನವಾಗುತ್ತಿದೆ ಎಂದು ರಾಹುಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೂಲಗಳ ಪ್ರಕಾರ, ಸ್ಪೀಕರ್ ಸ್ಥಾನಕ್ಕೆ ಓಂ ಬಿರ್ಲಾ ಅವರು ನಾಮಪತ್ರ ಸಲ್ಲಿಸಲಿದ್ದು, ವಿಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿವೆ ಎಂಬ ಮಾಹಿತಿ ಲಭಿಸಿವೆ.