ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವೇರಿದೆ.
ಈ ಉಪ ಚುನಾವಣೆಯಲ್ಲಿ ಡಿಕೆ ಬ್ರದರ್ಸ್(ಡಿ.ಕೆ.ಶಿವಕುಮಾರ್ & ಡಿ.ಕೆ.ಸುರೇಶ್) ಪೈಕಿ ಯಾರೇ ಸ್ಪರ್ಧಿಸಿದರೂ ಅವರನ್ನು ಸೋಲಿಸುವುದು ಖಚಿತ ಎಂದು ವಿಪಕ್ಷ ನಾಯಕ, ರಾಜ್ಯ ಬಿಜೆಪಿ ಧುರೀಣ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರ ಸಂಬಂಧ ಚರ್ಚಿಸಿ ನಿರ್ಧರಿಸುತ್ತೇವೆ. ಒಂದು ಪಕ್ಷದ ಅಭ್ಯರ್ಥಿಯನ್ನೇ ಕಣಕ್ಕಿಳಿಸುತ್ತೇವೆ. ಕುಮಾರಸ್ವಾಮಿ ಅವರು ಹೇಳಿದಂತೆ ಚನ್ನಪಟ್ಟಣದಲ್ಲಿ ನಾವು ಗೆಲ್ಲಬೇಕು ಅಷ್ಟೇ. ನಮ್ಮ ಅಭಿಪ್ರಾಯವೂ ಅದೇ ಆಗಿದೆ. ಅಭ್ಯರ್ಥಿ ಕಣಕ್ಕಿಳಿಸುವ ವಿಚಾರದಲ್ಲಿ ಉಭಯ ಪಕ್ಷಗಳ ನಾಯಕರೂ ಮುಕ್ತವಾಗಿದ್ದೇವೆ ಎಂದಿದ್ದಾರೆ.