ನವದೆಹಲಿ: ಕಲಾಪದ ವೇಳೆ ನೀಟ್ ಪರೀಕ್ಷೆಯ ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಕಲಾಪದಲ್ಲಿ ನೀಟ್ ಬಗ್ಗೆ ಮಾತನಾಡಿದ ರಾಜ್ಯ ಸಭಾ ಸದಸ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಪ್ರತಿಭಟನೆ ಮುಂದುವರಿಸದಂತೆ ಪ್ರತಿಪಕ್ಷಗಳಿಗೆ ಮನವಿ ಮಾಡಿದರು.
ನೀಟ್ ಅಕ್ರಮದ ಕುರಿತು ತನಿಖೆ ನಡೆಯುತ್ತಿದ್ದು, ಸರ್ಕಾರದ ಘನತೆಗೆ ಧಕ್ಕೆ ತರುವುದು ಸರಿಯಲ್ಲ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಸಿಬಿಐ ತನಿಖೆಗೆ ಒಪ್ಪಿಸಿದೆ. ತನಿಖೆ ಪೂರ್ಣಗೊಂಡ ಬಳಿಕ ಮಾತನಾಡಿದರೆ ಅರ್ಥವಿರುತ್ತದೆ. ಆದರೆ ಮೊದಲೇ ಸರ್ಕಾರದ ವಿರುದ್ಧ ಅನಗತ್ಯ ಆರೋಪ ಮಾಡಬಾರದು ಎಂದಿದ್ದಾರೆ.
ಇನ್ನು ನೀಟ್ ಪರೀಕ್ಷೆಯ ಹಗರಣದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನೊಂದಿದ್ದಾರೆ. ಅವರಿಗೆ ಅನ್ಯಾಯವಾಗಿದೆ ಎಂದೂ ಗೌಡರು ಆತಂಕ ವ್ಯಕ್ತಪಡಿಸಿದರು.