ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಮಂಗಳೂರು ನಗರದಲ್ಲಿ ಇಂದು ಬೆಳ್ಳಂ ಬೆಳಗ್ಗೆ ವಿಪರೀತ ಮಳೆ ಸುರಿಯಲಾರಂಭಿಸಿದೆ. ಈ ಸಂಬಂಧ ಮಾಹಿತಿ ನೀಡಿರುವ ಅವಮಾನ ಇಲಾಖೆಯು ಜಿಲ್ಲೆಯ ಜು.೬ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ ಎಂದಿರುವ ಇಲಾಖೆ, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಅತ್ಯಧಿಕ ಮಳೆ ಆಗಲಿದೆ. ಹೀಗಾಗಿ ಈ ಮೂರೂ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ನಂತರದ ೨ ದಿನ ಕರಾವಳಿಯಲ್ಲೇ ಮಳೆ ತೀವ್ರಗೊಳ್ಳಲಿದ್ದು, ಜು.6 & 7ರಂದು ಕರಾವಳಿಯ ಇದೇ ಮೂರು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಆಗುವ ಲಕ್ಷಣವಿದ್ದು, ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಾಮರಾಜನಗರ, ತುಮಕೂರು, ದಾವಣಗೆರೆ, ಬಳ್ಳಾರಿ, ಕೋಲಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಸೇರಿ ಇತರೆಡೆ ಸಾಮಾನ್ಯ ಮಳೆಯಾಗುವ ಬಗ್ಗೆ ಮುನ್ಸೂಚನೆ ಇದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.