ಕಲಬುರಗಿ: ಬಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸಿಪಿಐ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಬಿದ್ದಾಪುರ ಕಾಲೋನಿ ಬಳಿ ನಡೆದಿದೆ.
ಮೃತರನ್ನು ಬಾಪುಗೌಡ(45) ಎಂದು ಗುರುತಿಸಲಾಗಿದೆ. ಇವರು ನಗರದ ಪೊಲೀಸ್ ಆಯುಕ್ತಾಲಯದ ವೈಯರ್ಲೆಸ್ ವಿಭಾಗದಲ್ಲಿ ಸಿಪಿಐ ಆಗಿ ಕೆಲಸ ಮಾಡುತ್ತಿದ್ದರು. ಕ್ಯಾನ್ಸರ್ ಕಾಯಿಲೆಯಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಮೃತದೇಹವನ್ನು ಕಲಬುರಗಿ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ವಾಡಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.