ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಹೌದು, ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ BSY ಸೇರಿ ನಾಲ್ವರು ಆರೋಪಿಗಳಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಸಲ್ಲಿಸಿದ್ದ ದೋಷಾರೋಪಣಾ ಪಟ್ಟಿಯನ್ನು ಪರಿಗಣಿಸಿದ ಒಂದನೇ ತ್ವರಿತ ಗತಿ ನ್ಯಾಯಾಲಯ, ಬಿಎಸ್ ವೈ ಸೇರಿ ಎಲ್ಲರೂ ಜು.16ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು. ಹಾಗಾಗಿ ಎಲ್ಲಾ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಮುಂದೂಡಿದೆ.
ಸಹಾಯ ಕೇಳಿಕೊಂಡು ಮನೆಗೆ ಬಂದಿದ್ದ ಬಾಲಕಿಗೆ ಯಡಿಯೂರಪ್ಪ ಮತ್ತು ಸಹಚರರು ಲೈಂಗಿಕ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ದೂರು ದಾಖಲಾಗಿದೆ.