ಶಿವಮೊಗ್ಗ: ಇನ್ನೋವಾ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಸಂಭವಿಸಿದೆ.
ಮೃತರ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹಾಗೂ ಗಾಯಾಳುಗಳನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಜಖಂಗೊಂಡಿದ್ದ ಎರಡೂ ಕಾರುಗಳನ್ನು ಸದ್ಯ ತೆರವು ಮಾಡಲಾಗಿದೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲಿಸುತ್ತಿದ್ದಾರೆ.