ಕೋಲಾರ: 30 ಸಾವಿರ ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಾಲೂರಿನ ತಾಲೂಕು ಪಂಚಾಯತ್ ಕಚೇರಿಯಲ್ಲಿ ನಡೆದಿದೆ.
ಭೂ ದಾಖಲೆಗಳ ವಿಭಾಗದ ಸಹಾಯಕ ನಿದೇರ್ಶಕಿ ಅಶ್ವಿನಿ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್ ತಪ್ಪಿತಸ್ಥ ಅಧಿಕಾರಿಗಳಾಗಿದ್ದಾರೆ. ಭೂ ಪರಿವರ್ತನೆಗೆ 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಲೋಕಾ ಅಧಿಕಾರಿಗಳು ಬಂಧಿಸಿದ್ದಾರೆ.
ಹೊಸಕೋಟೆಯ ಮಂಜುನಾಥ್ ಎಂಬುವವರ ಬಳಿ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.