ಭೀಕರ ಅಪಘಾತ: 18 ಮಂದಿ ಕೊನೆಯುಸಿರು

ಉನ್ನಾವೋ: ಉತ್ತರ ಪ್ರದೇಶದ ಉನ್ನಾವೋದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 18 ಮಂದಿ ಕೊನೆಯುಸಿರೆಳೆದು ಹಲವರು ಗಾಯಗೊಂಡಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ.

ಲಖನೌ-ದೆಹಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಡಬಲ್ ಡೆಕ್ಕರ್ ಬಸ್ ವೇಗವಾಗಿ ಬಂದು ಎದುರಿಗೆ ಬರುತ್ತಿದ್ದ ಹಾಲಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿ ಮೃತದೇಹಗಳು, ಗಾಜಿನ ಚೂರುಗಳು ಹಾಗೂ ಇನ್ನಿತರೆ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಸದ್ಯ ಮೃತದೇಹಗಳನ್ನು ಹಾಗೂ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸುವ ಕಾರ್ಯವನ್ನು ಪೊಲೀಸರು, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾತ್ಮಕ ಸಿಬ್ಬಂದಿ ಮಾಡುತ್ತಿದ್ದು, ಸ್ಥಳೀಯರೂ ಸಾಥ್ ನೀಡಿದ್ದಾರೆ.

ಇನ್ನು ಸಿಎಂ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಅಗತ್ಯ ಸಹಕಾರ ಮತ್ತು ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *