ಬೆಂಗಳೂರು: ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಕೊನೆಯುಸಿರೆಳೆದಿದ್ದು, ಸಿಎಂ ಸಿದ್ದರಾಮಯ್ಯನವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
“ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಬರೆದುಕೊಂಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ನಿನ್ನೆ ರಾತ್ರಿ ಬೆನಶಂಕರಿಯ ಅವರ ನಿವಾಸದಲ್ಲಿ ಉಸಿರು ಚಲ್ಲಿದ್ದರು.