ಚಿತ್ರದುರ್ಗ: ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂಬ ಕಾರಣಕ್ಕೆ ಆಟೋ ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಹುನುವಿನಡು ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಮೂವತ್ತು ವರ್ಷದ ಶ್ರೀನಿವಾಸ ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ, ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಚಾಲಕನ ಮೇಲೆ ಭೀಕರವಾಗಿ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಲಭಿಸಬೇಕಿದೆ.