ಚಿಕ್ಕಬಳ್ಳಾಪುರ: ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ್ದಾರೆಂದು ಆರೋಪಿಸಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವಿಷಯ ತಿಳಿದು ಪ್ರಿಯಕರ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಈ ಘಟನೆಯು ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು, ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ, ಇಬ್ಬರಿಂದಲೂ ಮಾಹಿತಿ ಕಲೆಹಾಕಿದ್ದಾರೆ.
ಯುವತಿಯು ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ನಿವಾಸಿ ಸಿರಿಷಾ ಸಂತ್ರಸ್ತೆಯಾಗಿದ್ದು, ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿರುವ ತಿಮ್ಮಣ್ಣರಾಮಪ್ಪ ಭೂಸರೆಡ್ಡಿ ಪ್ರಿಯಕರನಾಗಿದ್ದಾನೆ. ಇಬ್ಬರೂ ಚಿಕ್ಕಬಳ್ಳಾಪುರದ ಮುನ್ಸಿಪಾಲ್ ಕಾಲೇಜಿನಲ್ಲಿ ದೂರ ಶಿಕ್ಷಣ ಪಡೆಯುತ್ತಿದ್ದರು. ಈ ವೇಳೆ ಪರಸ್ಪರ ಪರಿಚಯ ಮಾಡಿಕೊಂಡು ಸ್ನೇಹಿತರಾಗಿದ್ದರು. ನಂತರದ ದಿನಗಳಲ್ಲಿ ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ ಎಲ್ಲವೂ ಮುಗಿದ ಬಳಿಕ ಪೇದೆ ಜಾತಿ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.