ಕಲಬುರಗಿ: ಯುವಕರ ತಂಡವೊಂದು ಸ್ನೇಹಿತನ ಮದುವೆ ಮೆರವಣಿಗೆ ವೇಳೆ ರಾಮ ಮಂದಿರ ಕುರಿತ ಡಿಜೆ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ, ಇನ್ನೊಂದು ಕೋಮಿನ ಯುವಕರ ತಂಡ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಇಟಗಾ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಭೀಮಾಶಂಕರ್ ಎಂಬ ಯುವಕನ ಮೇಲೆ ಅನ್ಯಕೋವಿನ ಯುವಕರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇನ್ನು ಗಾಯಾಳು ಯುವಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಗುಲ್ಬರ್ಗಾ ವಿ.ವಿ.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.