ಉಡುಪಿ: ಇತ್ತೀಚೆಗಷ್ಟೇ ಕೊಡಗು ಜಿಲ್ಲೆಯ ಮಡಿಕೇರಿ ಮೂಲದ ನಿಲಿಕಾ ಪೊನ್ನಪ್ಪ ಎಂಬ ಯುವತಿ ದೃದಯಾಘಾತಕ್ಕೆ ಬಲಿಯಾಗಿದ್ದಳು. ಈ ಪ್ರಕರಣ ಮಾಸುವ ಬೆನ್ನಲ್ಲೇ ಉಡುಪಿ ಜಿಲ್ಲೆಯಲ್ಲಿ ಎಳೆ ಜೀವವೊಂದು ಹೃದಯಾಘಾತಕ್ಕೆ ಒಳಗಾಗಿ ಉಸಿರು ಚೆಲ್ಲಿದೆ.
ಹೌದು, ಈ ಘಟನೆಯು ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದ್ದು, ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ(16) ಮೃತ ದುರ್ದೈವಿಯಾಗಿದ್ದಾಳೆ. ಈಕೆ ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಎಂದು ಹೇಳಲಾಗಿದೆ.
ಬಾಲಕಿಗೆ ಬೆಳ್ಳಂ ಬೆಳಗ್ಗೆಯೇ ಹೃದಯಾಘಾತ ಕಾಣಿಸಿಕೊಂಡಿತ್ತು. ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚೀಟ್ಸ್ ಫಲಕಾರಿಯಾಗಿಲ್ಲ ಎಂದು ಹೇಳಲಾಗಿದೆ. ಇನ್ನು ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಎಳೆ ಜೀವಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.