ಬೆಳಗಾವಿ: ಹಳೆಯ ವಿಷಮ್ಯದಿಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ದುರ್ಘಟನೆ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ಇಂದು ನಡೆದಿದೆ.
ಮೃತ ವ್ಯಕ್ತಿಯನ್ನು ಗ್ರಾಮದ ನಿವಾಸಿಯೇ ಆದ ಮೋಹನ ತಳವಾರ(52) ಎಂದು ಗುರುತಿಸಲಾಗಿದೆ. ಇನ್ನು ಘಟನೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.