ಚಿಕ್ಕಮಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಂದುವಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸುಭೀಕ್ಷಾ ಎಂದು ಗುರುತಿಸಲಾಗಿದೆ. ಕಳೆದ ಏಳು ವರ್ಷಗಳ ಹಿಂದೆ ಗ್ರಾಮದ ಪ್ರವೀಣ್ ಎಂಬಾತನ ಜತೆ ಮದುವೆಯಾಗಿತ್ತು. ದಂಪತಿಗೆ ಓರ್ವ ಪುತ್ರ ಕೂಡ ಇದ್ದ. ಈ ನಡುವೆ ಮಹಿಳೆಗೆ ಪತಿ ಸೇರಿದಂತೆ ಆತನ ಕುಟುಂಬಸ್ಥರೆಲ್ಲರೂ ನಿರಂತರವಾಗಿ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನು ಈ ಘಟನೆಯು ನಿನ್ನೆ ಸಂಜೆ ನಾಲ್ಕು ಗಂಟೆಯಲ್ಲಿ ನಡೆದಿದೆಯಾದರೂ ಸ್ಥಳದ ಮಹಜರು ಈವರೆಗೆ ನಡೆದಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.