ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ವಾಟರ್ ಟ್ಯಾಂಕರ್ ವೊಂದು ಯುವಕನ ತಲೆ ಮೇಲೆ ಹರಿದ ಪರಿಣಾಮ ೨೧ ವರ್ಷ ಯುವಕ ಸ್ಥಳದಲ್ಲೇ ಕೊನೆಯುಸಿಲ್ರೆದಿರುವ ಘಟನೆ ಬೆಂಗಳೂರಿನ ಕೊತ್ತನೂರು ದಿಣ್ಣೆ ಆರ್ ಬಿಐ ಲೇಔಟ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಮುಂದೆ ಚಲಿಸುತ್ತಿದ್ದ ಯುವಕನಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿತ್ತು. ಕೂಡಲೇ ಬೈಕ್ ನಿಂದ ಕೆಳಗೆ ಬಿದ್ದ ಯುವಕನ ತಲೆ ಮೇಲೆ ಟ್ಯಾಂಕರ್ ಹರಿದಿತ್ತು. ತಲೆ ನಜ್ಜುಗುಜ್ಜಾದ ಪರಿಣಾಮ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ ಎನ್ನಲಾಗಿದೆ.
ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕೆ.ಎಸ್.ಲೇ ಔಟ್ ನಲ್ಲಿ ಪ್ರಕರಣ ದಾಖಲಾಗಿದೆ.