ಚೆನ್ನೈ: ದೇಶಕ್ಕೆ ನೀಟ್ ಪರೀಕ್ಷೆಯ ಅಗತ್ಯತೆ ಇಲ್ಲವೇ ಇಲ್ಲವೆಂದು ತಮಿಳುನಾಡಿನ ಪ್ರಾದೇಶಿಕ ಪಕ್ಷ ಟಿವಿಕೆ ಪಕ್ಷದ ಮುಖ್ಯಸ್ಥ ಮತ್ತು ನಟ ವಿಜಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚೆನ್ನೈನಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನೀಟ್ ಪರೀಕ್ಷೆ ಮೇಲೆ ಜನರಿಗೆ ನಂಬಿಕೆ ಇಲ್ಲದಂತಾಗಿದೆ. ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡುವುದೇ ಇದಕ್ಕಿರುವ ಏಕೈಕ ಪರಿಹಾರ. ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ಪರೀಕ್ಷೆಯ ವಿರುದ್ಧ ಅಂಗೀಕರಿಸಿರುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ತಮಿಳಿಗರ ಭಾವನೆಯನ್ನು ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನೂ ಕೂಡ ಒತ್ತಾಯಿಸುತ್ತೇನೆ. ಅಲ್ಲದೆ ಶಿಕ್ಷಣವನ್ನು ಸಮವರ್ತಿ ಪಟ್ಟಿಯಿಂದ ರಾಜ್ಯಪಟ್ಟಿಗೆ ತರಬೇಕೆಂದೂ ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಇನ್ನು ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿರುವುದು ಗೊತ್ತಿರುವ ವಿಚಾರವೇ.