ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿ ಕೊಹ್ಲಿ ಒಡೆತನದ ‘ಒನ್8 ಕಮ್ಯೂನ್’ ಹೆಸರಿನ ಪಬ್ ಇದೆ. ಇಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೋರಿ ಪಬ್ ನಡೆಸಲಾಗುತ್ತಿದೆ. ಅಲ್ಲದೆ ನಿಯಮ ಉಲ್ಲಂಘಿಸಿ ತಡರಾತ್ರಿವರೆಗೂ ಪಾರ್ಟಿ ನಡೆಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಬೆಂಗಳೂರು ಮಹಾನಗರದಲ್ಲಿ ಮಧ್ಯರಾತ್ರಿ ೧೨ ಗಂಟೆಗೆ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳೆಲ್ಲವೂ ಕ್ಲೋಸ್ ಮಾಡಬೇಕೆಂಬ ನಿಯಮವಿದೆ.