ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ನಿನ್ನೆ ರಾತ್ರಿ 10.30ರ ಸುಮಾರಿಗೆ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕಾರ್ಡಿಯಾಲಜಿ, ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷತೆಗಳ ವೈದ್ಯರ ತಂಡಗಳು ಅವರನ್ನು ತಪಾಸಣೆ ಮಾಡಿದ್ದವು.
ಇನ್ನು NDA ಸಂಸದೀಯ ಪಕ್ಷದ ನಾಯಕ, ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಮತ್ತು ಲೋಕಸಭೆಯ ಆಡಳಿತ ಪಕ್ಷದ ನಾಯಕರಾಗಿ ಆಯ್ಕೆಯಾದ ಕೂಡಲೇ ಪ್ರಧಾನಿ ಮೋದಿ ಕಳೆದ ಜೂ.7ರಂದು ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದುದು ಗೊತ್ತೇ ಇದೆ.