ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ A1 ಆರೋಪಿಯಾಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ರಾಜ್ಯ ಹೈಕೋರ್ಟ್ ಇಂದು ಬಿಗ್ ರಿಲೀಫ್ ನೀಡಿದೆ.
ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ನಿನ್ನೆಯಷ್ಟೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಯಡಿಯೂರಪ್ಪ ಸೇರಿ ನಾಲ್ವರೂ ಆರೋಪಿಗಳ ಜಾಮೀನು ಅವಧಿಯನ್ನು ಮತ್ತೆ ಎರಡು ವಾರಗಳ ಕಾಲ ವಿಸ್ತರಣೆ ಮಾಡಿದೆ.
ಸಹಾಯ ಕೇಳಿಕೊಂಡು ಮನೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಯಡಿಯೂರಪ್ಪ ಮತ್ತು ಇತರರು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಪ್ರಕರಣ ಇದಾಗಿದೆ.