ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಹಾಗೂ ಅಕ್ರಮಕ್ಕೆ ಕಾರಣರಾಗಿರುವ ಸಿಎಂ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಬಿಜೆಪಿ ಘಟಕವು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೂ ಮುಡಾ ನಿವೇಶನವನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧ ಸ್ಪಷ್ಟನೆ ನೀಡಿರುವ ಸಿಎಂ, ಜಮೀನಿನ ಬದಲಾಗಿ ಬಿಜೆಪಿ ಸರ್ಕಾರವೇ ನಿವೇಶನವನ್ನು ನೀಡಿದೆ ಎಂದು ಈಗಾಗಲೇ ಸಮರ್ಥಿಸಿಕೊಂಡಿದ್ದಾರೆ.