ಬೆಂಗಳೂರು: ಕೆ.ಎನ್.ರಾಜಣ್ಣ ಅವರನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿದ್ದೇವೆಂದು ಸಿಎಂ ಸಿದ್ದರಾಮಯ್ಯ ಅವರು ಇಂದು ಹೈಕಮಾಂಡ್ ಅವರಿಗೆ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕೈ ಹೈಕಮಾಂಡ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದೇವೆ ಎಂದು ಅಧಿಕೃತವಾಗಿ ಸ್ಪಷ್ಟನೆ ನೀಡಿದ್ದಾರೆ.
ಇನ್ನು ರಾಜಣ್ಣ ಅವರಿಂದ ಸಚಿವ ಸ್ಥಾನದ ರಾಜೀನಾಮೆ ಪಡೆದ ಬೆನ್ನಲ್ಲೇ ಹೈಕಮಾಂಡ್ ರಾಜಣ್ಣ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡುವ ಬಗ್ಗೆ ಗಂಭೀರ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.