ದಕ್ಷಿಣಕನ್ನಡ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆರ್ಭಟ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಜಿಲ್ಲೆಯಾದ್ಯಂತ ಭಾರೀ ವರ್ಷಧಾರೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ(ಜೂ.27) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇಂದು ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಮಳೆರಾಯ ಅಬ್ಬರಿಸುತ್ತಿದ್ದಾನೆ. ಪರಿಣಾಮ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಜಿಲ್ಲಾಡಳಿತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದೆ.