ಬೆಂಗಳೂರು : ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧದ ಮೊದಲ ಕೇಸ್ ಕುರಿತು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ವಜಾಗೊಳಿಸಿದೆ.
ಹಾಸನದ ಹೊಳೆನರಸೀಪುರದ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ಇದಾಗಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್, ಜಾಮೀನು ನೀಡಲು ಸಾಧ್ಯವಿಲ್ಲವೆಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್, ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಳೆದ ಸೋಮವಾರವೇ ಆದೇಶಿಸಿತ್ತು. ಅದರಂತೆ ಪ್ರಜ್ವಲ್ ನ್ಯಾಯಾಂಗ ಬಂಧನ ಅವಧಿಯು ಜು.8ಕ್ಕೆ ಕೊನೆಗೊಳ್ಳಲಿದೆ.