ಉತ್ತರ ಪ್ರದೇಶ: ಹತ್ರಾಸ್ ಕಾಲ್ತುಳಿತ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಮೂರ್ತಿ ನೇತೃತ್ವದಲ್ಲಿ ಐವರು ಪರಿಣಿತರ ಸಮಿತಿಯನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸರ್ವೋಚ್ಚ ನ್ಯಾಯಾಲಯಕ್ಕೆ ಇಂದು ಅರ್ಜಿ ಸಲ್ಲಿಸಲಾಗಿದೆ.
ಅರ್ಜಿಯಲ್ಲಿ ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಯಾವ ರೀತಿಯ ಕ್ರಮಗಳನ್ನು ಅನುಸರಿಸಬೇಕೆಂಬ ಬಗ್ಗೆ ಮಾರ್ಗಸೂಚಿ ಸಿದ್ಧಪಡಿಸಿ ಸರ್ಕಾರಕ್ಕೆ ಸೂಚಿಸುವಂತೆ ಸಮಿತಿಗೂ ನಿರ್ದೇಶನ ನೀಡಬೇಕು. ಘಟನೆಗೆ ಸಂಬಂಧಿಸಿದ ವಸ್ತುಸ್ಥಿತಿಯನ್ನು ಸುಪ್ರೀಂ ಪೀಠದ ಮುಂದಿಡುವಂತೆ ರಾಜ್ಯ ಸರ್ಕಾರಕ್ಕೂ ಸೂಚಿಸಬೇಕು ಹಾಗೂ ಘಟನೆಗೆ ಕಾರಣಕರ್ತರಾಗಿರುವ ಬೇಜವಾಬ್ದಾರಿಯುತ ಅಧಿಕಾರಿಗಳು ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದೂ ಮನವಿ ಮಾಡಿಕೊಳ್ಳಲಾಗಿದೆ.
ಇನ್ನು ನಿನ್ನೆ ಹಿಂದೂ ಧರ್ಮದ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಬೃಹತ್ ಜನಸ್ತೋಮ ಸೇರಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ ೧೨೧ ಮಂದಿ ಕೊನೆಯುಸಿರೆಳೆದಿದ್ದರು.