ಮತ್ತೆ ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೇನ್ ಪ್ರತಿಜ್ಞಾವಿಧಿ

ರಾಂಚಿ: ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಜೆಎಂಎಂ ಪಕ್ಷದ ಮುಖ್ಯಸ್ಥ ಹೇಮಂತ್ ಸೊರೇನ್ ಅವರು ಇಂದು 3ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೇಮಂತ್ ಅವರು ಅಕ್ರಮ ಭೂ ಹಗರಣ ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ತರುವಾಯ ಹೇಮಂತ್ ಜಾಮೀನಿನ ಮೇಲೆ ಹೊರ ಬಂದಿದ್ದರು.

ಇದರ ಬೆನ್ನಲ್ಲೇ ಚಂಪೈ ಸೊರೇನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಹೇಮಂತ್, ನೂತನ ಸರ್ಕಾರ ರಚಿಸುವುದಾಗಿ ಹಕ್ಕು ಮಂಡಿಸಿದ್ದರು. ಅದರಂತೆ ಇಂದು ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಎಂಎಂ ಪಕ್ಷಗಳು ಮೈತ್ರಿ ಸರ್ಕಾರ ನಡೆಸುತ್ತಿವೆ.

Leave a Reply

Your email address will not be published. Required fields are marked *