ರಾಜ್ಯದ ವಿದ್ಯಾರ್ಥಿಗಳಿಗೆ ಭರ್ಜರಿ GOOD NEWS

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್‌ಗಳ ಜೊತೆಗೆ ಕೌಶಲ್ಯಕ್ಕೆ ಸಂಬಂಧಿಸಿದ ಒಂದು ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು 1 ವರ್ಷದವರೆಗೆ ಮಾಸಿಕ ₹11 ಸಾವಿರದಿಂದ ₹17 ಸಾವಿರದವರೆಗೆ ಶಿಷ್ಯವೇತನ ನೀಡಲು ನಿರ್ಧರಿಸಿದೆ.

ಈ ಕುರಿತು ಸರ್ಕಾರ ಪ್ರಕಟಣೆ ಹೊರಡಿಸಿದೆ. ಉನ್ನತ ಶಿಕ್ಷಣದಲ್ಲಿ ಸಾಮಾನ್ಯ ಪದವಿ ಕೋರ್ಸ್‌ಗಳ ಜತೆಗೆ ಕೌಶಲಾಧಾರಿತ ವಿಷಯಗಳ ಅಧ್ಯಯನಕ್ಕೂ ಅವಕಾಶವಿದೆ. ಇದೇ ಶೈಕ್ಷಣಿಕ ಸಾಲಿನಿಂದ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕೊನೆಯ 5 & 6ನೇ ಸೆಮಿಸ್ಟರ್‌ನಲ್ಲಿ ಶಿಷ್ಯ ವೇತನ ಸಿಗಲಿದೆ.

ಹತ್ತು ಮಂದಿ ನಿವೃತ್ತ ಐಎಎಸ್‌ ಅಧಿಕಾರಿಗಳು ಸ್ಥಾಪಿಸಿರುವ ಕ್ರಿಸ್ಪ್‌ ಹೆಸರಿನ ಸಂಸ್ಥೆ ಜತೆ ಉನ್ನತ ಶಿಕ್ಷಣದಲ್ಲಿ ಕೌಶಲಾಧಾರಿತ ಕೋರ್ಸ್‌ಗಳನ್ನು ಪರಿಚಯಿಸುವ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ ಹಾಕಿದೆ. ಮೊದಲ ವರ್ಷ 60 ಕಾಲೇಜುಗಳಲ್ಲಿ 3,600 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಮೂರು ವರ್ಷಗಳಲ್ಲಿ 239 ಕಾಲೇಜುಗಳಿಗೆ ಯೋಜನೆ ವಿಸ್ತರಿಸಲಾಗುವುದು. 2026-27ರ ವೇಳೆಗೆ 14,340 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಗುರಿ ಹೊಂದಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *