ಬೆಂಗಳೂರು: ರಾಜ್ಯದ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಸ್ವೀಕರಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಿರುವ ಪ್ರಾಧಿಕಾರವು, ಯಾವುದೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿಯೂ ಶುಲ್ಕ ಪಾವತಿಯಾಗಿಲ್ಲ ಎಂದು ಕಂಡುಬಂದರೆ ಆ ಬಗ್ಗೆ ಖುದ್ದು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ತಿಳಿಸಬೇಕೆಂದು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರ ಒದಗಿಸಿರುವ ಲಿಂಕ್ ಮುಖೇನ ತಮ್ಮ ಅರ್ಜಿಯ ಸ್ಟೇಟಸ್ ಪರಿಶೀಲಿಸಿಕೊಂಡು ಕ್ರಮ ಕೈಗೊಳ್ಳಬೇಕಿದೆ.
ಇನ್ನು ಈ ಹಿಂದೆ ಕನ್ನಡ ಕಡ್ಡಾಯ ಪತ್ರಿಕೆಯನ್ನು ಬರೆದು ಪಾಸಾಗಿದ್ದರೂ ಅಥವಾ ಹತ್ತನೇ ತರಗತಿವರೆಗೆ ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಅಭ್ಯಸಿಸಿದ್ದರೂ ಅಂಥವರೂ ಕೂಡ ಸೆ.29ರಂದು ನಡೆಸಲಾಗುವ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಬರೆಯಲೇಬೇಕು. ಅಲ್ಲದೆ ಪತ್ರಿಕೆಯಲ್ಲಿ ಕನಿಷ್ಠ 50 ಅಂಕಗಳನ್ನು ಪಡೆದು ಉತ್ತೀರ್ಣರಾಗಲೇಬೇಕು. ಇಲ್ಲವಾದಲ್ಲಿ ಅ.27ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ(Time table) ಬರೆಯಲು ಅವಕಾಶ ನೀಡಲಾಗುವುದಿಲ್ಲವೆಂದು ಎಚ್ಚರಿಕೆ ನೀಡಿದೆ.
ನಿಮ್ಮ ಅರ್ಜಿಯ ಸ್ಟೇಟಸ್ ಪರಿಶೀಲಿಸಲು ಇಲ್ಲಿ ಕ್ಲಿಕ್ಕಿಸಿ.