ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದು ಕಾರ್ಮಿಕರು ಮಣ್ಣಿನ ಅಡಿಯಲ್ಲೇ ಸಿಲುಕಿಕೊಂಡಿರುವ ದುರ್ಘಟನೆ ದಕ್ಷಿಣಾಕ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಇಂದು ನಡೆದಿದೆ.
ನಗರದ ಬಲ್ಮಠ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದೆ. ರೋಹನ್ ಕಾರ್ಪೊರೇಷನ್ ಲಿಮಿಟೆಡ್ ಎಂಬ ಸಂಸ್ಥೆಗೆ ಸೇರಿದ ಕಟ್ಟಡ ಇದಾಗಿದ್ದು, ಇಬ್ಬರು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸಿದೆ.
ಕಾರ್ಮಿಕರ ರಕ್ಷಣೆಗಾಗಿ ಭರದ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳಕ್ಕೆ ಆರೋಗ್ಯ ಸಿಬ್ಬಂದಿಯೂ ಆಂಬುಲೆನ್ಸ್ ಸಮೇತ ಆಗಮಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.