ಬಳ್ಳಾರಿ: ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಸಹಾಯಧನವು ಇನ್ನೆರಡು ದಿನಗಳಲ್ಲಿ ಪಾವತಿಯಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡ್ಮೂರು ತಿಂಗಳಿನಿಂದ ಹಣ ಬಂದಿಲ್ಲ ಎಂಬುದು ಶುದ್ಧ ಸುಳ್ಳು. ಮೇ 5ರವರೆಗೆ ಹಣ ಡಿಬಿಟಿ ಮೂಲಕ ರವಾನೆಯಾಗಿದೆ. ಇನ್ನು ಜೂನ್ ತಿಂಗಳದ್ದು ಡಿಬಿಟಿ ಎಲ್ಲ ರೆಡಿಯಾಗಿದ್ದು, ಇನ್ನೆರಡು ದಿನಗಳಲ್ಲೇ ಜಮೆಯಾಗಲಿದೆ. ಸಹಾಯಧನವು ಫಲಾನುಭವಿಗಳಿಗೆ ಸಿಗುವುದು ತಡವಾಗುತ್ತಿದೆ. ಕಳೆದ 2-3 ತಿಂಗಳಿಂದ ಸಿಕ್ಕಿಲ್ಲ ಎಂಬ ಸುದ್ದಿಯಲ್ಲಿ ಸತ್ಯವಿಲ್ಲ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ, ಪಂಗಡಗಳ ಹಣ ಬಳಕೆಯಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದರು.