ಅಕ್ರಮ ಸಂಬಂಧ ಶಂಕೆ: ಮಹಿಳೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಲಕ್ಕೇಪಲ್ಲಿ ಎಂಬಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಲಾವಣ್ಯ() ಎಂದು ಹೇಳಲಾಗಿದೆ. ಮೃತರು ಮಂಜುನಾಥ್ ಎಂಬುವವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳೂ ಇದ್ದಾರೆ. ಈ ನಡುವೆ ಮಹಿಳೆ ಅನಾಹುತ ಮಾಡಿಕೊಂಡಿದ್ದಾರೆ. ಕೂಡಲೇ ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *