ಬೆಳಗಾವಿ : ಸದ್ಯಕ್ಕೆ ಡಿಸಿಎಂ ಹುದ್ದೆ ಖಾಲಿಯಿಲ್ಲ, ಖಾಲಿ ಆದಾಗ ಪ್ರಯತ್ನ ಮಾಡಿದರೆ ಒಳ್ಳೆಯದು ಎಂದು ಸಚಿವ ಚಲುವರಾಯ ಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಬಣದ ಸಚಿವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಸಿಎಂ ಬಣದ ಕೆಲ ಸಚಿವರು ಇದೀಗ ಮತ್ತೊಮ್ಮೆ ಹೆಚ್ಚುವರಿ ಡಿಸಿಎಂ ಸ್ಥಾನದ ಬಗ್ಗೆ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.
ಇಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೆಚ್ಚುವರಿ ಡಿಸಿಎಂ ಸ್ಥಾನಗಳ ಕುರಿತಾಗಿ ಹೈಕಮಾಂಡ್ ನಿರ್ಧರಿಸಲಿದೆ. ನಮ್ಮದು ಜಾತ್ಯಾತೀತ ಪಕ್ಷ, ಎಲ್ಲರಿಗೂ ಅವಕಾಶ ಸಿಗಲಿದೆ ಎಂದರು.
ಇನ್ನು ಮಾಜಿ ಪ್ರಧಾನಿ ದೇವೇಗೌಡರು ಮಾಡದ್ದನ್ನು ತಾವು ಮಾಡಿ ತೋರಿಸುತ್ತೇವೆಂದು ಭರವಸೆ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನಮ್ಮ ಪ್ರೋತ್ಸಾಹವಿದೆ. ಇದೀಗ ಅವರು ಕೇಂದ್ರ ಸಚಿವರಾಗಿದ್ದಾರೆ. ಮೊದಲೇ ಟೀಕಿಸುವ ಬಿಜೆಪಿಗರ ಸಂಸ್ಕೃತಿ ನಮ್ಮದಲ್ಲ ಎಂದರು.