ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಈ ಬಗ್ಗೆ ಸಿಎಂ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಕೆ.ಎನ್.ರಾಜಣ್ಣ, ಖಾರವಾಗಿ ಪ್ರತಿಕೆಯಿಸಿದ್ದಾರೆ. ಸಿಎಂ ಸ್ಥಾನವನ್ನು ಯಾರು ಬಿಟ್ಟು ಕೊಡುತ್ತಾರೆ? ಕೊನೆಪಕ್ಷ ಸ್ವಾಮೀಜಿ ತಮ್ಮ ಸ್ಥಾನವನ್ನು ಬಿಟ್ಟು ಕೊಡಲು ಸಿದ್ಧರಿದ್ದಾರಾ ಕೇಳಿ. ಅವರು ತಮ್ಮ ಸ್ಥಾನ ಬಿಟ್ಟುಕೊಟ್ಟರೆ, ನಾಳೆಯಿಂದ ನಾನೇ ಖಾವಿ ಧರಿಸಿ ಸ್ವಾಮೀಜಿಯಾಗುತ್ತೇನೆಂದು ಟಾಂಗ್ ನೀಡಿದ್ದಾರೆ.
ತಮ್ಮ ಸ್ಥಾನವನ್ನು ಬಿಟ್ಟುಕೊಡಲು ಯಾರೂ ಸಿದ್ಧರಿರುವುದಿಲ್ಲ. ಸ್ವಾಮೀಜಿ ಯಾವ ಉದ್ದೇಶದಿಂದ ಹೀಗೆ ಹೇಳಿದ್ದಾರೆಂದು ನನಗೆ ಗೊತ್ತಿಲ್ಲ. ಆದರೆ ಸ್ವಾಮೀಜಿ ಹೇಳಿದ ಕೂಡಲೇ ಸಿಎಂ ಸ್ಥಾನ ಬಿಟ್ಟು ಕೊಡಲು ಆಗುತ್ತಾ? ಎಂದು ಸಿದ್ದು ಪರ ಬ್ಯಾಟ್ ಬೀಸಿದ್ದಾರೆ.