ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರದ ಹಾವಳಿ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಪರಿಣಾಮ ಕಳೆದ ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರೋಗ್ಯಾಧಿಕಾರಿಯೇ ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯು ಮೈಸೂರಿನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ನಾಗೇಂದ್ರ ಎಂದು ಗುರುತಿಸಲಾಗಿದ್ದು, ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಮುದಾಯ ಆರೋಗ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇದರೊಂದಿಗೆ ಹಾಸನ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಒಟ್ಟು 7 ಮಂದಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ.
ಡೆಂಗ್ಯೂ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಆಸ್ಪತ್ರೆ ಗಳಿಗೆ ಹಲವು ಸೂಚನೆಗಳನ್ನು ಬಿಡುಗಡೆ ಮಾಡಿದ್ದು, ವಾಸಸ್ಥಳದ ಸುತ್ತಮುತ್ತ ಶುಚಿತ್ವ ಕಾಪಾಡಿಕೊಂಡು ಸೊಳ್ಳೆಗಳಿಂದ ರಕ್ಷಣೆ ಪಡೆಯುವಂತೆ ಸಾರ್ವಜನಿಕರಲ್ಲೂ ಅರಿವು ಮೂಡಿಸುತ್ತಿದೆ.