ದೆಹಲಿ: ಹದಿನೆಂಟನೇ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಬ್ಬರು ಸಂಸದರು ನಾಮಪತ್ರ ಸಲ್ಲಿಸಿದ್ದಾರೆ.
ಆಡಳಿತ ಪಕ್ಷದ ಪರವಾಗಿ ಬಿಜೆಪಿಯ ಓಂ ಬಿರ್ಲಾ ಹಾಗೂ ವಿಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ಸಂಸದ ಕೆ.ಸುರೇಶ್ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ.
ನಾವು ನಿಮ್ಮ ಸ್ಪೀಕರ್ ಅಭ್ಯರ್ಥಿ ಬೆಂಬಲಿಸುತ್ತೇವೆ. ನೀವು ನಮ್ಮ ಡೆಪ್ಯೂಟಿ ಸ್ಪೀಕರ್ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಕಾಂಗ್ರೆಸ್ ಕೇಳಿಕೊಂಡಿತ್ತು. ಆದರೆ ಇದಕ್ಕೆ ಬಿಜೆಪಿ ಒಪ್ಪದ ಹಿನ್ನೆಲೆಯಲ್ಲಿ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳೂ ತಮ್ಮ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸಿವೆ.
ಹದಿನೇಳನೇ ಲೋಕಸಭೆಯ ಅವಧಿ ಮುಗಿಯುವವರೆಗೆ ಬಿಜೆಪಿಯ ಓಂ ಬಿರ್ಲಾ ಅವರೇ ಸ್ಪೀಕರ್ ಆಗಿದ್ದರು ಎಂಬುದು ಗಮನಿಸುವ ವಿಚಾರ.