ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಅವರನ್ನು ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರ ಸ್ನೇಹಿತೆ ಸಮತಾ ಗೌಡ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾಗಿದ್ದು, ಬರೋಬ್ಬರಿ ಹದಿನೈದು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಸಮತಾ ಅವರಿಗೂ ನೋಟಿಸ್ ನೀಡಿದ್ದು, ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಮತಾ, ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ದರ್ಶನ್ ಜತೆ ಸಮತಾ ಪವಿತ್ರಾ ಗೌಡ ಅವರಿಗೆ ಸೇರಿದ ಆಸ್ತಿ ಬಗ್ಗೆ ಮಾತನಾಡಿರುವ ಸಾಧ್ಯತೆ ಇದೆ. ಅದನ್ನು ಖುದ್ದು ನಟ ದರ್ಶನ್ ಅವರೇ ಪವಿತ್ರಾಗೆ ಕೊಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಹೆಚ್ಚಿನ, ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.