ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಸಂಬಂಧ ಇಂದು ಸಿಐಡಿ ಅಧಿಕಾರಿಗಳು BSY ವಿರುದ್ಧ ಒಂದನೇ ತ್ವರಿತ ಗತಿಯ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದ್ದಾರೆ.
ದೋಷಾರೋಪಣಾಪಟ್ಟಿಯಲ್ಲಿ ಯಡಿಯೂರಪ್ಪ ಸೇರಿದಂತೆ ಮರಿಸ್ವಾಮಿ, ರುದ್ರೇಶ್, ಅರುಣ್ ಎಂಬ ನಾಲ್ವರ ಹೆಸರನ್ನು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ 75 ಮಂದಿಯನ್ನು ಸಾಕ್ಷಿಯಾಗಿ ಪರಿಗಣಿಸಲಾಗಿದೆ. ಸುಮಾರು 750 ಪುಟಗಳ ಚಾರ್ಜ್ ಶೀಟ್ ಇದಾಗಿದೆ.
ಸಹಾಯ ಕೇಳಿಕೊಂಡು ಮನೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಬಿಎಸ್ವೈ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತನಿಖೆ ಮುಕ್ತಾಯಗೊಂಡ ಪರಿಣಾಮ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.