SHAMANOORU SHIVASHANKARAPPA: ಡಿಕೆಶಿಗೆ ಸಿಎಂ ಪಟ್ಟ: ಶಾಮನೂರು ಅಭಿಪ್ರಾಯ?

ದಾವಣಗೆರೆ: ಸಿಎಂ ಸಿದ್ದರಾಮಯ್ಯನವರು ತಮ್ಮ ಸ್ಥಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕೆಂಬ ಚಂದ್ರಶೇಖರನಾಥ ಶ್ರೀಗಳ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದು, ಯಾರೋ ಹೇಳಿದ್ರು ಅಂದಮಾತ್ರಕ್ಕೆ ಸಿಎಂ ಸ್ಥಾನ ಬದಲಾವಣೆ ಮಾಡಲು ಆಗುತ್ತೇನ್ರೀ? ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಇತ್ತ ಧಾರವಾಡದಲ್ಲಿ ಮಾತನಾಡಿರುವ ಸಚಿವ ಚಲುವರಾಯ ಸ್ವಾಮಿ, ಸಿಎಂಗೆ ಬದಲಾವಣೆಗೆ ಮುಂದೊಂದು ದಿನ ಕಾಲ ಬರುತ್ತೆ. ಆದರೆ ಅದಕ್ಕೆಲ್ಲಾ ಹೈಕಮಾಂಡ್ ತೀರ್ಮಾನವೇ ಅಂತಿಮ. ಅದಕ್ಕೆ ಪಕ್ಷದ ಎಲ್ಲಾ ಶಾಸಕರ ಅಭಿಮತವೂ ಬೇಕು. ಅಭಿಪ್ರಾಯ ಹೇಳಿಕೊಳ್ಳಲು ಎಲ್ಲರಿಗೂ ಅವಕಾಶವಿದೆ. ಈ ನಿಟ್ಟಿನಲ್ಲಿ ಚಂದ್ರಶೇಖರ್ ಸ್ವಾಮೀಜಿ ಅವರೂ ತಮ್ಮ ಅಭಿಮತ ವ್ಯಕ್ತಪಡಿಸಿದ್ದಾರೆಂದು ಸಮರ್ಥಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *