ಜೂ.29ರ ರಾತ್ರಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಇಂದು ದೆಹಲಿಗೆ ತೆರಳಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸುತ್ತೇನೆ. ಈ ವೇಳೆ ರಾಜ್ಯಕ್ಕೆ ಸಂಬಂಧಿಸಿದ ಅನುದಾನ ಮತ್ತು ಯೋಜನೆಗಳ ಕುರಿತು ಚರ್ಚಿಸುತ್ತೇನೆ. ಬಳಿಕ ಪ್ರಧಾನಿ ಮೋದಿ ಅವರನ್ನೂ ಒಳಗೊಂಡಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗುತ್ತೇನೆಂದು ಸ್ಪಷ್ಟಪಡಿಸಿದ್ದಾರೆ.
ಈ ವೇಳೆ ಸಿಎಂ ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನೂ ಭೇಟಿಯಾಗುವ ಸಾಧ್ಯತೆ ಇದೆ.