ಸ್ವಾಮೀಜಿ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ: ಸಿಎಂ

ನವದೆಹಲಿ: ಸಿಎಂ ಸ್ಥಾನವನ್ನು ಡಿಸಿಎಂ ಡಿಕೆಶಿಗೆ ಬಿಟ್ಟುಕೊಡಬೇಕೆಂಬ ರಾಜಶೇಖರನಾಥ ಸ್ವಾಮೀಜಿ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ತಾವೇ ಸಿಎಂ ಆಗಿ ಮುಂದುವರಿಯುತ್ತೇನೆಂದು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಸಿಎಂ ಬದಲಾವಣೆ ವಿಚಾರವಾಗಿ ಒಕ್ಕಲಿಗ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಸ್ವಾಮೀಜಿಗಳು ತಮ್ಮ-ತಮ್ಮ ಸಮುದಾಯಗಳು ನಾಯಕರನ್ನು ಸಿಎಂ ಮಾಡುವಂತೆ ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಸ್ವಾಮೀಜಿಗಳಿಗೂ, ರಾಜಕೀಯಕ್ಕೂ ಯಾವುದೇ ಸಂಬಂಧ ಇರವುದಿಲ್ಲ. ಸಿಎಂ ಯಾರಾಗಬೇಕೆಂಬುದನ್ನು ನಿರ್ಧರಿಸುವುದು ಶಾಸಕರು ಹಾಗೂ ಹೈಕಮಾಂಡ್ ಎಂದು ಸ್ವಾಮೀಜಿಗಳ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ.

Leave a Reply

Your email address will not be published. Required fields are marked *