ವಿಜಯಪುರ: ಜೂಜಾಟ ಆಡುತ್ತಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೃಷ್ಣ ನದಿಯಲ್ಲಿ ತೆಪ್ಪದಲ್ಲಿ ತೆರಳುತ್ತಿದ್ದಾಗ ತೆಪ್ಪ ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಆರು ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಮೂವರ ಶವ ಪತ್ತೆಯಾಗಿದ್ದು, ಹೊರ ತೆಗೆಯಲಾಗಿದೆ.
ಜಿಲ್ಲೆಯ ಕೊಲ್ಹಾರ ತಾಲೂಕಿನ ಕೃಷ್ಣಾ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೋಲಾರ ಪಟ್ಟಣದ ನಿವಾಸಿ ದಶರಥ ಗೌಡರ್(54), ತಯಾಬ್ ಹಾಗೂ ಮತ್ತೋರ್ವನ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ಮಾಡಬೇಕಿರುವ ಕಾರಣ ಮೃತದೇಹಗಳನ್ನು ಸದ್ಯ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಉಳಿದ ಮೂವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಮುಂದುವರಿಸಿದ್ದಾರೆ.