ಕಲಬುರಗಿ: ಉಪಹಾರ ಸೇವಿಸಿದ ಹಲವು ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ನಡೆದಿದೆ.
17 ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್ ಆಗಿದ್ದು, ಅವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಳಗಿನ ಉಪಾಹಾರ ಸೇವಿಸಿದ ಕೆಲವೇ ಕ್ಷಣಗಳ ತರುವಾಯ ವಿದ್ಯಾರ್ಥಿನಿಯರು ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಮಕ್ಕಳಿಗೆ ಫುಡ್ ಪಾಯ್ಸನ್ ಆಗಿದೆ ಎಂದು ಹೇಳಲಾಗುತ್ತಿದೆ. ಘಟನೆಯಿಂದ ಪೋಷಕರು ವಸತಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಕಿಡಿಕಾರುತ್ತಿದ್ದಾರೆ.