ಶಿಕ್ಷಕನ ಮೊಬೈಲ್ ನಲ್ಲಿ 5000 ಅಶ್ಲೀಲ ವಿಡಿಯೋ!

ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿದ್ದ ಮುನಿರಾಜು ಎಂಬಾತನ ಬಳಿ ಇದ್ದ ಮೂರು ಮೊಬೈಲ್ ಗಳಲ್ಲಿ ಬರೋಬ್ಬರಿ 5000 ಅಶ್ಲೀಲ ವಿಡಿಯೋಗಳಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿ ನೀಡಿದ ದೂರಿನ ಮೇರೆಗೆ ಶಿಕ್ಷಣ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಈ ನಡುವೆ ಆರೋಪಿಯು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಹೈಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದ.

ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ವಿಡಿಯೋಗಳ ಸಂಖ್ಯೆಯನ್ನು ನೋಡಿದರೆ ಮುಂದೆ ಏನೆಲ್ಲಾ ಆಗಬಹುದಿತ್ತು ಎಂಬುದು ಅರಿವಾಗುತ್ತದೆ. ಪ್ರಕರಣದಲ್ಲಿ ಅರ್ಜಿದಾರನನ್ನು ಖಲಾಸೆಗೊಳಿಸಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟು, ಅರ್ಜಿಯನ್ನು ವಜಾಗೊಳಿಸಿದೆ.

ಇನ್ನು ಶಿಕ್ಷಕನ ಮೊಬೈಲ್ ನಲ್ಲಿ ಶಾಲಾ ಬಾಲಕಿಯರು ಬಟ್ಟೆ ಬದಲಿಸುವ ದೃಶ್ಯಗಳು ಸೆರೆಯಾಗಿದ್ದವು ಎನ್ನಲಾಗಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಕ್ಕಳೇ ದೂರು ನೀಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *