ಮುಂಬೈ: ಬರೋಬ್ಬರಿ ಹದಿನೇಳು ವರ್ಷದ ಬಳಿಕ ಟಿ೨೦ ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾ ಸದ್ಯ ಮುಂಬೈ ಮಹಾನಗರದಲ್ಲಿ ಭರ್ಜರಿ ರೋಡ್ ಶೋ ನಡೆಸುತ್ತಿದೆ. ನಗರದಲ್ಲಿ ಪ್ರಸ್ತುತ ಮಳೆ ಸುರಿಯುತ್ತಿದ್ದು, ಇದು ಅಭಿಮಾನಿಗಳ ಹರ್ಷೋದ್ಘಾರಕ್ಕೆ ಅಡ್ಡಿಯಾಗಿಲ್ಲ.
ತಂಡದ ನಾಯಕ ರೋಹಿತ್ ಶರ್ಮಾ, ಕೊಹ್ಲಿ ಸೇರಿದಂತೆ ಎಲ್ಲಾ ಆಟಗಾರರೂ ಈ ರೋಡ್ ಶೋದಲ್ಲಿ ಭಾಗಿಯಾಗಿದ್ದು, ಅಭಿಮಾನಿಗಳತ್ತ ಕೈಬೀಸುತ್ತಿದ್ದಾರೆ.
ಇಂದು ಬೆಳಗ್ಗೆಯಷ್ಟೇ ದೆಹಲಿಗೆ ಬಂದಿಳಿದಿದ್ದ ತಂಡ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿ, ಪ್ರಧಾನ ಮಂತ್ರಿಗಳಿಂದ ಸನ್ಮಾನವನ್ನೂ ಸ್ವೀಕರಿಸಿದ್ದರು.