ಮಂಡ್ಯ: ಜಗಳವಾಡುತ್ತಿದ್ದಾಗ ವ್ಯಕ್ತಿಯೋರ್ವ ತನ್ನ ಪತ್ನಿಯ ಕುತ್ತಿಗೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿದ್ದಲ್ಲದೆ, ಕೊಡಲಿಯಿಂದ ಮನಬಂದಂತೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಮಂಥನಹಳ್ಳಿಯಲ್ಲಿ ನಡೆದಿದೆ.
ತೇಜಸ್ವಿನಿ() ಪತಿಯಿಂದ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪತಿ ಜಯರಾಮು ಆರೋಪಿಯಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಪತಿ-ಪತ್ನಿಯರ ನಡುವೆ ನಡೆಯುತ್ತಿರುವ ಇಂತಹ ಘಟನೆಗಳು ರಾಜ್ಯದಲ್ಲಿ ಇತ್ತೀಚೆಗೆ ವಾರಕ್ಕೊಂದು ಎಂಬಂತೆ ಆಗಾಗ ನಡೆಯುತ್ತಲೇ ಇರುವುದು ಆಘಾತಕಾರಿ ವಿಷಯ.