ಉಡುಪಿ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಪಂ ವ್ಯಾಪ್ತಿಯ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳು ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಿಸಲಾಗಿದೆ.
ಮೃತ ಮಕ್ಕಳನ್ನು ಧನರಾಜ್(13) & ಛಾಯಾ(7) ಎಂದು ಗುರುತಿಸಲಾಗಿದೆ. ತಾಯಿ ಶೀಲಾ ಸ್ಥಿತಿ ಗಂಭೀರವಾಗಿದ್ದು, ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಇಂತಹ ಕೆಟ್ಟ ನಿರ್ಧಾರ ಕೈಗೊಳ್ಳಲು ಕಾರಣ ಏನೆಂಬುದು ತಿಳಿದುಬಂದಿಲ್ಲ.
ಮತ್ತೊಂಡೆಡೆ ಶಾಲಾ ವಾಹನ ಹರಿದು 4 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ಸಂಭವಿಸಿದೆ. ಮೃತ ಬಾಲಕನನ್ನು ಸಂಗಪ್ಪ ಹೊಸೂರ್ ಎಂಬುವವರ ಪುತ್ರ ಅಭಿನಂದನ್ ಹೊಸೂರ್(4) ಎಂದು ಗುರುತಿಸಲಾಗಿದೆ.