ಬೆಂಗಳೂರು: ಸನಾತನ ಧರ್ಮವನ್ನು ನಿಂದಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದ ಡಿಎಂಕೆ ನಾಯಕ ಉದಯನಿಧಿ ಸ್ಟ್ಯಾಲಿನ್ ಅವರಿಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಒಂದು ಲಕ್ಷ ರೂ. ಠೇವಣಿ ಇಡುವಂತೆ ಸೂಚಿಸಿರುವ ನ್ಯಾಯಾಲಯ, ವಿಚಾರಣೆ ವೇಳೆ ಪೊಲೀಸರಿಗೆ ಸಹಕರಿಸಬೇಕೆಂದು ಸೂಚಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಆ.8ಕ್ಕೆ ಮುಂದೂಡಿದೆ.
ಕಳೆದ ಲೋಕಸಭಾ ಚುನಾವಣೆಯ ಪ್ರಚಾರ ವೇಳೆ ಚೆನ್ನೈನಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದ ಉದಯನಿಧಿ, ಸನಾತನ ಧರ್ಮವು ಡೆಂಘಿ, ಮಲೇರಿಯಾ ಕಾಯಿಲೆ ಇದ್ದಂತೆ. ಅದನ್ನು ಬುಡಸಮೇತ ಕಿತ್ತೊಗೆಯಬೇಕೆಂದು ಹೇಳಿಕೆ ನೀಡಿದ್ದರು. ಸಚಿವರ ಈ ಹೇಳಿಕೆಯನ್ನು ಬಿಜೆಪಿ ಸೇರಿದಂತೆ ಹಿಂದೂ ಪರ ಸಂಘಗಳು ತೀವ್ರವಾಗಿ ಖಂಡಿಸಿದ್ದವು.